ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿಯೇ ನೇಣುಬಿಗಿದುಕೊಂಡು ನೌಕರ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಸುಭಾಷ್ ಆತ್ಮಹತ್ಯೆಗೆ ಶರಣಾಗಿರುವ ಆಸ್ಪತ್ರೆ ನೌಕರ. ನಿನ್ನೆ ಭಾನುವಾರ ರಜೆ ಇದ್ದರೂ ಕೂಡ ಮನೆಗೆ ಹೋಗದೇ ಆಸ್ಪತ್ರೆಯಲ್ಲಿಯೇ ಇದ್ದ ಸುಭಾಷ್ ಇದೀಗ ನೇಣಿಗೆ ಕೊರಳೊಡ್ಡಿದ್ದಾರೆ.
ಸುಭಾಷ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ