*ಗೋಕಾಕ್: ಆಸ್ಪತ್ರೆಯಲ್ಲಿಯೇ ಸಿಬ್ಬಂದಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿಯೇ ನೇಣುಬಿಗಿದುಕೊಂಡು ನೌಕರ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸುಭಾಷ್ ಆತ್ಮಹತ್ಯೆಗೆ ಶರಣಾಗಿರುವ ಆಸ್ಪತ್ರೆ ನೌಕರ. ನಿನ್ನೆ ಭಾನುವಾರ ರಜೆ ಇದ್ದರೂ ಕೂಡ ಮನೆಗೆ ಹೋಗದೇ ಆಸ್ಪತ್ರೆಯಲ್ಲಿಯೇ ಇದ್ದ ಸುಭಾಷ್ ಇದೀಗ ನೇಣಿಗೆ ಕೊರಳೊಡ್ಡಿದ್ದಾರೆ. ಸುಭಾಷ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ತಾಯಿ: ಬಳಿಕ ಆತ್ಮಹತ್ಯೆಗೆ … Continue reading *ಗೋಕಾಕ್: ಆಸ್ಪತ್ರೆಯಲ್ಲಿಯೇ ಸಿಬ್ಬಂದಿ ಆತ್ಮಹತ್ಯೆಗೆ ಶರಣು*