ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಚಿನದ ಅಂಗಡಿ ಮಾಲಕಿಗೆ ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿಯನ್ನು ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವರಾಯಿ ವರ್ಲ್ಡ್ ಆಫ್ ಜ್ಯುಲ್ಲೆರಿ ಅಂಗಡಿ ಮಾಲಕಿ ವನಿತಾ ಐತಾಳ್ ಅವರಿಗೆ 9 ಲಕ್ಷ ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ್ದರು. ಈ ಪ್ರಕರಣದಲ್ಲಿ ನಟ ಧರ್ಮೇಂದ್ರ ವಿರುದ್ಧವೂ ಆರೋಪ ಕೇಳಿಬಂದಿದೆ. ವನಿತಾ ಐತಾಳ್ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.
ಇಂದು ಐಶ್ವರ್ಯ ಹಾಗೂ ಆಕೆಯ ಪತಿ ಹರೀಶ್ ಗೌಡ ಇಬ್ಬರನ್ನು ಠಾಣೆಗೆ ವಿಚಾರಣೆಗೆ ಕರೆದಿದ್ದ ಪೊಲೀಸರು 3 ಗಂತೆ ಕಾಲ ವಿಚಾರಣೆ ನಡೆಸಿದ್ದಾರೆ. ಆರೋಪಿಗಳಿಂದ ಸೂಕ್ತ ಉತ್ತರ ಬಾರದ ಹಿನ್ನೆಲೆಯಲ್ಲಿ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಾ ಇಬ್ಬರನ್ನೂ ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ