ಪ್ರಗತಿವಾಹಿನಿ ಸುದ್ದಿ: ಚಿನ್ನ ಖರೀದಿಸುವ ಯೋಜನೆಯಲ್ಲಿರುವವರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಕುಸಿಯುತ್ತಿದೆ. ಆದರೆ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ. ಹಾಗಾಗಿ ಶೀಘ್ರದಲ್ಲೇ ಮತ್ತೆ ಬೆಲೆ ಇಳಿಕೆಯಾಗುವ ಸಾಧ್ಯತೆಗಳಿವೆ.
ಪ್ರಸ್ತುತ ಬೆಂಗಳೂರು, ದೆಹಲಿ ಸೇರಿದಂತೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಿಂದಿನ ದಿನಕ್ಕೆ ಹೋಲಿಸಿದರೆ ಚಿನ್ನದ ದರ ಇಳಿಕೆಯಾಗುತ್ತಿದೆ. ದೇಶೀಯವಾಗಿ ಚಿನ್ನ ಮತ್ತು ಬೆಳ್ಳಿ ದರ ಸ್ಥಿರವಾಗಿದೆ. ಪ್ರಸ್ತುತ ಬೆಂಗಳೂರಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ ಗೆ ರೂ. 67,600 ಇದೆ. 10 ಗ್ರಾಂಗೆ 24 ಕ್ಯಾರೆಟ್ ಚಿನ್ನದ ಬೆಲೆ ಈಗ ರೂ. 73,750 ನಲ್ಲಿ ವಹಿವಾಟು ನಡೆಸುತ್ತಿದೆ. ದೆಹಲಿಯಲ್ಲೂ ಬೆಲೆ ಸ್ಥಿರವಾಗಿದೆ 22 ಕ್ಯಾರಟ್‌ಗೆ 67,750 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರ ರೂ. 73,900 ನಲ್ಲಿ ವಹಿವಾಟಾಗುತ್ತಿದೆ.
ಬೆಳ್ಳಿ ಬೆಲೆಯಲ್ಲಿ ಕೂಡ ಯಾವುದೇ ಬದಲಾವಣೆ ಇಲ್ಲ. ಪ್ರಸ್ತುತ ಬೆಂಗಳೂರಿನಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 95,300 ಇದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಪ್ರದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ