Film & EntertainmentKannada NewsKarnataka NewsNationalPolitics

*ಚಿನ್ನ ಸ್ಮಗ್ಲಿಂಗ್ ಕೇಸ್: ನಟಿಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಚಿನ್ನ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟಿ ರನ್ಯಾ ರಾವ್ ಅವರಿಗೆ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಕಳೆದ ಕೆಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ರನ್ಯಾ ರಾವ್, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಇಂದು ನ್ಯಾಯಾಲಯದ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. 

Home add -Advt

ಚಿನ್ನದ ಅಕ್ರಮ ಸಾಗಾಟದ ಗಂಭೀರ ಆರೋಪದ ಮೇಲೆ ತನಿಖಾ ಸಂಸ್ಥೆಗಳು ನಟಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದವು. ಜಾಮೀನು ಅರ್ಜಿಯ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ಅಂತಿಮವಾಗಿ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದ್ದಾರೆ.

ಈ ಬೆಳವಣಿಗೆಯು ನಟಿ ಹಾಗೂ ಅವರ ಬೆಂಬಲಿಗರಲ್ಲಿ ಹರ್ಷ ತಂದಿದೆ. ಸದ್ಯಕ್ಕೆ ತನಿಖೆ ಮುಂದುವರಿಯುತ್ತಿದ್ದು ನ್ಯಾಯಾಲಯದ ಆದೇಶದಂತೆ ರನ್ಯಾ ರಾವ್ ಅವರು ತನಿಖಾಧಿಕಾರಿಗಳ ವಿಚಾರಣೆಗೆ ಸಹಕರಿಸಬೇಕಿದೆ.

Related Articles

Back to top button