ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಸಹಾಯ ಮಾಡಿದ ಆರೋಪದಲ್ಲಿ ಇಬ್ಬರು ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಮಾನ ನಿಲ್ದಾಣದ ಗುಪ್ತಚರ ಘಟಕ ತಂಡಕ್ಕೆ ಹಸ್ತಾಂತರಿಸಲಾಗಿದೆ.
ದುಬೈನಿಂದ ಬಂದಿಳಿದ ಇಬ್ಬರು ಪ್ರಯಾಣಿಕರು ಒಂದು ಕೆ.ಜಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ತಂದಿದ್ದು, ಅದನ್ನು ಏರ್ ಇಂಡಿಯಾದ 22 ವರ್ಷದ ಮಹಿಳಾ ಸಿಬ್ಬಂದಿ ತೆಗೆದುಕೊಂಡು ವಿಮಾನ ನಿಲ್ದಾಣದ ಹೊರಗೆ ಕಾಯುತ್ತಿದ್ದ ಇಬ್ಬರಿಗೆ ಈ ಚಿನ್ನ ಹಸ್ತಾಂತರಿಸುತ್ತಿದ್ದರು. ಈ ವೇಳೆ ಮಹಿಳಾ ಸಿಬ್ಬಂದಿ ಸೇರಿದಂತೆ ಐವರನ್ನು ವಶಕ್ಕೆ ಪಡೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ