*ಚಿನ್ನಾಭರಣ ಕಳುವು ಪ್ರಕರಣ; ಖತರ್ನಾಕ್ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 1ರಂದು ಎಪಿಎಂಸಿ ಠಾಣೆ ವ್ಯಾಪ್ತಿಯ ರಘುನಾಥ್ ಟೊಪಣ್ಣ ಪಾಟೀಲ್ ತಮ್ಮ ಮನೆಯಲ್ಲಿ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಎಸಿಪಿ ಮಾರ್ಕೆಟ್ ಅವರ ಮಾರ್ಗದರ್ಶನದಲ್ಲಿ ಎಪಿಎಂಸಿ ಠಾಣೆಯ ಪಿಐ ವಿಶ್ವನಾಥ್ ಡಿ ಕಬ್ಬೂರಿ ಹಾಗೂ ಸಿಬ್ಬಂದಿಯವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುಲಗಣಿ ಶಬ್ಬೀರ ಶೇಖ (24) ಬೆಳಗಾವಿಯ ಅನಗೋಳದ ನಿವಾಸಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 2,55, 000 ರೂಪಾಯಿ ಮೌಲ್ಯದ 40 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿ ಎರಡು ಕಡೆ ಕಳುವು ಮಾಡಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರ ಕಾರ್ಯಾಚರಣೆಯ ಬಗ್ಗೆ ಬೆಳಗಾವಿ ಪೊಲೀಸ್ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ