
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೈನಂದಿನ ವಹಿವಾತಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸಾಮಾನ್ಯ. ಆದರೆ ಕೆಲ ದಿನಗಳಿಂದ ಬಂಗಾರದ ಬೆಲೆಯಲ್ಲಿ ಸತತ ಏರಿಕೆ ಕಂಡುಬರುತ್ತಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಇಂದು ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ರಾಜ್ಯ ರಾಜಧಾನಿ ಸೇರಿದಂತೆ ಮಹಾನಗರಗಳ್ಅಲ್ಲಿ ಆಭರಣ ಬೆಲೆಯಲ್ಲಿ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,550 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,86,000 ರೂ ಆಗಿದೆ.
ಬೆಳ್ಳಿ ದರದಲ್ಲಿಯೂ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿಯಷ್ಟು ಬೆಳ್ಳಿ ದರ ಹೆಚ್ಚಳವಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,400 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,920 ರೂಪಾಯಿ ಆಗಿದೆ.100 ಗ್ರಾಂ ಚಿನ್ನಕ್ಕೆ 4,89,200 ರೂ.ಆಗಿದೆ. ಇನ್ನು ಕೆಜಿ ಬೆಳ್ಳಿಗೆ 70,200 ರೂಪಾಯಿ ಆಗಿದೆ.
ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಆಗಿದೆ.