ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣ ಪ್ರಿಯರಿಗೆ ಬಿಗ್ ಶಾಕ್. ಹಲವು ದಿನಗಳಿಂದ ಚಿನ್ನದ ದರದಲ್ಲಿ ಏರಿಕೆಯಾಗುತ್ತಿದ್ದು, ಇಂದೂ ಕೂಡ ದರ ಏರಿಕೆ ಮುಂದುವರೆದಿದೆ.
ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸಾಮಾನ್ಯ. ಆದರೆ ಕೆಲ ದಿನಗಳಿಂದ ಬಂಗಾರದ ಬೆಲೆಯಲ್ಲಿ ಸತತ ಏರಿಕೆ ಕಂಡುಬರುತ್ತಲೇ ಇದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,850 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,48,500 ರೂಪಾಯಿ ಆಗಿದೆ.
24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,930 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,300 ರೂ ಆಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,000 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,800 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,280 ರೂಪಾಯಿ ಆಗಿದೆ.100 ಗ್ರಾಂ ಚಿನ್ನಕ್ಕೆ 4,92,800 ರೂ.ಆಗಿದೆ. ಇನ್ನು ಕೆಜಿ ಬೆಳ್ಳಿಗೆ 70,300 ರೂಪಾಯಿ ಆಗಿದೆ.
ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,600 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 47,760 ರೂಪಾಯಿ ಆಗಿದೆ.100 ಗ್ರಾಂ ಚಿನ್ನಕ್ಕೆ 4,77,600 ರೂ.ಆಗಿದೆ.
ಪ್ರತಿ ಟನ್ ಕಬ್ಬಿಗೆ 2700 ರೂ. : ಬಾಲಚಂದ್ರ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ