Latest

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಸಿಹಿಸುದ್ದಿ. ಚಿನ್ನ, ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದೆ.

ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸರ್ವೇ ಸಾಮಾನ್ಯ. ಹಬ್ಬದ ಸಂದರ್ಭದಲ್ಲಿ ಆಭರಣಗಳನ್ನು ಖರೀದಿರುವುದು ಹಲವರ ಸಂಪ್ರದಾಯ. ಈ ನಿಟ್ಟಿನಲ್ಲಿ ಚಿನ್ನ, ಬೆಳ್ಳಿ ದರ ಯಾವ ನಗರದಲ್ಲಿ ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಗಾರದ ಬೆಲೆ ಕಡಿಮೆಯಾಗಿದ್ದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,550 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂ ಆಗಿದೆ.

ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದ್ದು, 62,400 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,900 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,87,600 ರೂ.ಆಗಿದೆ. ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿದರ 67,600 ರೂಪಾಯಿ ಆಗಿದೆ.

ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,86,000 ರೂ.ಆಗಿದೆ.

ಬೆಳ್ಳಿ ದರದಲ್ಲಿ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 67,600 ರೂಪಾಯಿ ನಿಗದಿಯಾಗಿದೆ.
ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್ ಕೊಟ್ಟ ಸಿಎಂ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button