
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣ ಪ್ರಿಯರಿಗೆ ಕೊಂಚ ನಿರಾಸೆಯ ಸುದ್ದಿ. ಚಿನ್ನ ದರ ಏರಿಕೆ ಕಂಡಿದೆ. ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸರ್ವೇ ಸಾಮಾನ್ಯ. ಆದರೆ ಇಂದಿನ ದರ ಬದಲಾವಣೆಯಲ್ಲಿ ಬಂಗಾರದ ಬೆಲೆ ಏರಿಕೆಯಾಗಿದ್ದು, ಬೆಳ್ಳಿ ದರ ಇಳಿಕೆಯಾಗಿದೆ.
ಯಾವ ನಗರದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಗಾರದ ಬೆಲೆ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 44,950 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂ ಆಗಿದೆ.
ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ದರ 61,600 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,500 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,850 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,78,500 ರೂ.ಆಗಿದೆ. ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 61,600 ರೂಪಾಯಿ ಆಗಿದೆ.
ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,100 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,400 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 5,14,000 ರೂಪಾಯಿ ನಿಗದಿಯಾಗಿದೆ.
ಬೆಳ್ಳಿದರದಲ್ಲಿ ಕೆಜಿ ಬೆಳ್ಳಿಗೆ 61,000 ರೂಪಾಯಿ ಆಗಿದೆ.