ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣಗಳಲ್ಲಿ ದೈನಂದಿನ ದರ ಬದಲಾವಣೆ ಸರ್ವೇಸಾಮಾನ್ಯ. ಇಂದು ಯಾವ ನಗರದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ.
ಕಳೆದ ಕೆಲ ದಿನಗಳಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಕಂಡು ಬರುತ್ತಿದ್ದು, ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,200 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,42,000 ರೂ ನಿಗದಿಯಾಗಿದೆ.
24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,200 ರೂ ಆಗಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೆಜಿ ಬೆಳ್ಳಿ ದರ 63,600ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,500 ರೂಪಾಯಿ ನಿಗದಿಯಾಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,710 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,100 ರೂ ಆಗಿದೆ.
ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, ಕೆಜಿ ಬೆಳ್ಳಿ ದರ 67,400 ರೂಪಾಯಿ ನಿಗದಿಯಾಗಿದೆ.
ಮುಂಬೈ, ದೆಹಲಿ, ಹೈದರಾಬಾದ್, ಜೈಪುರ ಸೇರಿದಂತೆ ಹಲವು ನಗರಗಳಲ್ಲಿ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದೆ.
ಜೋಗ ಜಲಪಾತದ ಬಳಿ ಪಂಚತಾರಾ ಹೋಟೆಲ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆ
KSRTCಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಬರೋಬ್ಬರಿ 15 ಕೋಟಿ ವಂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ