Latest

ಆಭರಣ ಪ್ರಿಯರಿಗೆ ಬಿಗ್ ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣ ಪ್ರಿಯರಿಗೆ ಮತ್ತೆ ಆಘಾತ ಎದುರಾಗಿದೆ. ಇತ್ತೀಚೆಗೆ ಇಳಿಕೆ ಕಂದಿದ್ದ ಚಿನ್ನ-ಬೆಳ್ಳಿ ದರದಲ್ಲಿ ಇದೀಗ ಮತ್ತೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಚಿನ್ನದ ಬೆಲೆ 10 ಗ್ರಾಂ ಗೆ 1,090 ರೂಪಾಯಿ ಏರಿಕೆಯಾಗಿದೆ. ಇನ್ನು ಬೆಳ್ಳಿ ದರದಲ್ಲಿ ಕೂಡ ಭಾರಿ ಏರಿಕೆ ಕಂಡುಬಂದಿದೆ. ಯಾವ ನಗರದಲ್ಲಿ ಚಿನ್ನ-ಬೆಳ್ಳಿ ದರ ಎಷ್ಟಿದೆ ಇಲ್ಲಿದೆ ಮಾಹಿತಿ.

ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 46,700 ರೂ. ಇತ್ತು. ಇಂದು 47,700 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 50,950 ರೂ. ಇದ್ದುದು ಇಂದು 53,065 ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ದರ 48,800 ರೂ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ದರ 52,040 ರೂ ಆಗಿದೆ.

ಚೆನ್ನೈ, ಹೈದರಾಬಾದ್ ನಲ್ಲಿಯೂ ಇದೇ ದರವಿದ್ದು, ಮುಂಬೈನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನ 47,700 ರೂ, ದೆಹಲಿ- 47,700 ರೂ, ಕೊಲ್ಕತ್ತಾ- 47,700 ರೂ ಆಗಿದೆ.

24 ಕ್ಯಾರೆಟ್ 10 ಗ್ರಾಂ ಚಿನ್ನ ಚೆನ್ನೈನಲ್ಲಿ 53,240 ರೂ, ಮುಂಬೈ- 52,040 ರೂ, ದೆಹಲಿ- 52,040 ರೂ, ಕೊಲ್ಕತ್ತಾ- 52,040 ರೂ ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ದರದಲ್ಲಿಯೂ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 72,500 ರೂ ಆಗಿದ್ದರೆ, ಚೆನ್ನೈನಲ್ಲಿ 72,100 ರೂ ಹಾಗೂ ಮುಂಬೈನಲ್ಲಿ 67,200 ರೂ ಇದೆ.
ಕೆಜಿಎಫ್-2 ಟ್ರೇಲರ್ ರಿಲೀಸ್ ಗೆ ಡೇಟ್ ಫಿಕ್ಸ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button