
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುಗಾದಿ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಸಿಹಿ ಸುದ್ದಿ, ಕಳೆದ ನಾಲ್ಕು ದಿನಗಳಿಂದ ದೇಶದಲ್ಲಿ ಚಿನ್ನಾಭರಣ ಬೆಲೆ ಸತತ ಇಳಿಕೆಯಾಗುತ್ತಿದ್ದು, ಇಂದೂ ಕೂಡ ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದೆ. ಆದರೆ ಬೆಳ್ಳಿ ದರದಲ್ಲಿ ಭಾರಿ ಏರಿಕೆಯಾಗಿದೆ.
ಭಾರತದಲ್ಲಿ 22ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,650 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,980ರೂ ಆಗಿದೆ. ಬೆಳ್ಳಿಯ ಬೆಲೆ ಇಂದು 1 ಕೆಜಿಗೆ ಬರೋಬ್ಬರಿ 4,100 ರೂ. ಏರಿಕೆಯಾಗಿದೆ. ಮಹಾನಗರಗಳಲ್ಲಿ ಚಿನ್ನ ಬೆಳ್ಳಿ ದರ ಇಂದು ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,650 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ ಚಿನ್ನ 51,980 ರೂಪಾಯಿ ಇದೆ.
ಇನ್ನು ಹಲವು ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ದರ ಚೆನ್ನೈ- 47,920 ರೂ. ಮುಂಬೈ- 47,650 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,650 ರೂ, ಹೈದರಾಬಾದ್- 47,650 ರೂ, ಪುಣೆ- 47,700 ರೂ ಆಗಿದೆ,
24 ಕ್ಯಾರೆಟ್ ಚಿನ್ನ ಚೆನ್ನೈ- 52,280 ರೂ, ಮುಂಬೈ- 51,980 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,980 ರೂ, ಹೈದರಾಬಾದ್- 51,980 ರೂ, ಪುಣೆ- 52,030 ರೂ, ಮಂಗಳೂರು- 51,980 ರೂ ನಿಗದಿಯಾಗಿದೆ.
ಬೆಳ್ಳಿ ದರದಲ್ಲಿ ಭಾರಿ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ 72,100 ರೂ ನಿಗದಿಯಾಗಿದೆ. ದೆಹಲಿಯಲ್ಲಿ 67,200 ರೂ, ಹೈದರಾಬಾದ್- 72,100 ರೂ ದಾಖಲಾಗಿದೆ.