Latest

ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಇಲ್ಲಿದೆ ಸಮಗ್ರ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಲ ದಿನಗಳಿಂದ ಏರಿಕೆ ಕಂಡಿದ್ದ ಚಿನ್ನಾಭರಣ ದರ ಇಂದು ಇಳಿಕೆಯಾಗಿದೆ. ಹಾಗಾಗಿ ಆಭರಣ ಪ್ರಿಯರಿಗೆ ಸಿಹಿ ಸುದ್ದಿ.

ಯುಗಾದಿ ಹಬ್ಬದ ಸಂದರ್ಭದಲ್ಲಿ ಚಿನ್ನಾಭರಣಗಳ ದರ ಇಳಿಕೆಯಾಗಿರುವುದು ಖುಷಿಯ ವಿಚಾರ. ಇಂದು ದೇಶದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,300 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,600 ಆಗಿದೆ. ಆಭರಣ ಖರೀದಿಗೆ ಮುಂದಾಗುವವರು ಇಂದು ದೇಶದ ಯಾವ ನಗರದಲ್ಲಿ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ದರ ಯಾವ ರೀತಿಯಾಗಿದೆ ಎಂಬ ಬಗ್ಗೆ ಮಾಹಿತಿ ತಿಳಿದಿರಲೇಬೇಕು.

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,300 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ ಚಿನ್ನ 51,600 ರೂಪಾಯಿ ಆಗಿದೆ.

ಇನ್ನು ಹಲವು ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ದರ ಚೆನ್ನೈ- 48,050 ರೂ. ಮುಂಬೈ- 47,300 ರೂ, ದೆಹಲಿ- 47,300 ರೂ, ಕೊಲ್ಕತ್ತಾ- 47,300 ರೂ, ಮೈಸೂರು- 47,300 ರೂ. ಆಗಿದೆ.

24 ಕ್ಯಾರೆಟ್ ಚಿನ್ನ ಚೆನ್ನೈ- 52,420 ರೂ, ಮುಂಬೈ- 51,600 ರೂ, ದೆಹಲಿ- 51,600 ರೂ, ಕೊಲ್ಕತ್ತಾ- 51,600 ರೂ, ಹೈದರಾಬಾದ್- 51,600 ರೂ, ಕೇರಳ- 51,600 ರೂ,

ಇಂದು ದೇಶದಲ್ಲಿ ಬೆಳ್ಳಿ ದರ ಕೂಡ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 68,900 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ- 72,300 ರೂ ನಿಗದಿಯಾಗಿದೆ.

Related Articles

Back to top button