Latest

ಸ್ಥಿರತೆ ಕಂಡ ಬಂಗಾರ; ಬೆಳ್ಳಿ ದರ ಎಷ್ಟಿದೆ ಗೊತ್ತೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸರ್ವೇ ಸಾಮಾನ್ಯ. ಆದರೆ ಇಂದಿನ ದರ ಬದಲಾವಣೆಯಲ್ಲಿ ಬಂಗಾರದ ಬೆಲೆಯಲ್ಲಿ ಸ್ಥಿರತೆ ಕಂಡಿದ್ದು, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ.

ಯಾವ ನಗರದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಗಾರದ ಬೆಲೆ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 44,950 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂ ಆಗಿದೆ.

ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ದರ 61,600 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿ ಇಳಿದಿದೆ.

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,400 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,840 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,78,400 ರೂ.ಆಗಿದೆ. ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 61,600 ರೂಪಾಯಿ ಆಗಿದೆ.

ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,400 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ.

ಬೆಳ್ಳಿದರದಲ್ಲಿ ಕೆಜಿ ಬೆಳ್ಳಿಗೆ 65,500 ರೂಪಾಯಿ ಆಗಿದೆ.

ವಿಜಯಪುರ ಶೂನ್ಯ, ದಕ್ಷಿಣ ಕನ್ನಡ ಶೇ.45: ಎಲ್ಲಿ, ಎಷ್ಟು ಮತದಾನ? – ಸಮಗ್ರ ವಿವರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button