Latest

ಆಭರಣ ಪ್ರಿಯರಿಗೆ ಇಲ್ಲಿದೆ ಮಾಹಿತಿ; ಬಂಗಾರದ ಬೆಲೆಯಲ್ಲಿ ಇಂದಿನ ಬದಲಾವಣೆಯೇನು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ವರ್ಷದ ಆರಂಭದ ದಿನದಲ್ಲಿ ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡಿದ್ದೀರಾ? ಹಾಗಾದರೆ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು.

ದೇಶದ ಯಾವ ಭಾಗದಲ್ಲಿ ಚಿನ್ನಾಭರಣಗಳ ಬೆಲೆಯಲ್ಲಿ ಏನೆಲ್ಲಾ ವ್ಯತ್ಯಾಸಗಳಾಗಿವೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,600 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,96,000 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,900 ರೂ ಆಗಿದೆ.

ಆದರೆ ಬೆಳ್ಳಿ ದರದಲ್ಲಿ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿ ದರ 62,700 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,600 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,150 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,71,500 ರೂ.ಆಗಿದೆ.

ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 62,700 ರೂಪಾಯಿ ಆಗಿದೆ.

ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,56,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,740 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,97,400 ರೂಪಾಯಿ ನಿಗದಿಯಾಗಿದೆ.

ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 66,600 ರೂಪಾಯಿ ಆಗಿದೆ.

ಹೈದರಾಬಾದ್ ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,460 ರೂಪಾಯಿ ಇದ್ದು, 100 ಗ್ರಾಂ ಚಿನ್ನಕ್ಕೆ 4,54,600 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,600 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,96,000 ರೂಪಾಯಿ ನಿಗದಿಯಾಗಿದೆ.

ಬೆಳ್ಳಿದರದಲ್ಲಿ ಕೆಜಿ ಬೆಳ್ಳಿಗೆ 66,600 ರೂಪಾಯಿ ಆಗಿದೆ.
ನಾಳೆಯಿಂದ ಮಕ್ಕಳಿಗೆ ಕೊರೊನಾ ಲಸಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button