
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದಲ್ಲಿ ಚಿನ್ನಾಭರಣಗಳ ದರ ನಿನ್ನೆಯಿಂದ ಏರಿಕೆಯಾಗುತ್ತಿದ್ದು, ಇಂದು ಮತ್ತಷ್ಟು ದರ ಹೆಚ್ಚಳವಾಗಿದೆ. ನಿನ್ನೆ ಒಂದೇ ದಿನದಲ್ಲಿ ಚಿನ್ನದ ದರ 700 ರೂಪಾಯಿ ಏರಿಕೆಯಾಗಿದ್ದರೆ ಇಂದು 110 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಇಂದು 1500 ರೂಪಾಯಿ ಏರಿಕೆಯಾಗಿದೆ.
ಬಂಗಾರ ಖರೀದಿಗೆ ಪ್ಲಾನ್ ಮಾಡಿದ್ದರೆ ಯಾವ ಯಾವ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಎಷ್ಟಿದೆ ಎಂಬುದನ್ನು ಗಮನಿಸಲೇಬೇಕು.
ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,200 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ದರ 51,490 ರೂ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,250 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ದರ 51,540 ರೂ ಆಗಿದೆ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,150 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ದರ 52,530 ರೂ ಆಗಿದೆ. ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,200 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ದರ 51,490 ರೂ ಆಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,350 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ದರ 51,660 ರೂ ಆಗಿದೆ. ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,200 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ದರ 51,490 ರೂ ಆಗಿದೆ. ಪುಣೆ 51,570, ಮಂಗಳೂರು ನಗರ 51,540 ರೂ ಆಗಿದೆ.
ದೇಶದಲ್ಲಿ ಬೆಳ್ಳಿ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗಗನಮುಖಿಯಾಗಿದೆ. ನಿನ್ನೆ ಕೆಜಿ ಬೆಳ್ಳಿ ದರ 56,500 ರೂ ಇದ್ದಿದು ಇಂದು 58,000 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಕೆಜಿ ಬೆಳ್ಳಿ ದರ 63,700 ರೂಪಾಯಿ, ಮೈಸೂರು – 63,700 ರೂ ದೆಹಲಿ 58,400, ಹೈದರಾಬಾರ್ 63,700 ಆಗಿದೆ.
ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ