Latest

ದೈನಂದಿನ ಚಿನ್ನ, ಬೆಳ್ಳಿ ದರ; ಇಂದು ಯಾವ ನಗರದಲ್ಲಿ ಎಷ್ಟಿದೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಏರಿಳಿತ ಸಾಮಾನ್ಯ. ಆದರೆ ದೈನನಿಂದಿನ ದರ ಬದಲಾವಣೆಯಲ್ಲಿ ಆಭರಣಗಳ ಬೆಲೆಯಲ್ಲಿ ಬದಲಾವಣೆಯಾಗಿದೆಯೇ? ಇಂದು ಯಾವ ನಗರದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಇಲ್ಲಿದೆ ಮಾಹಿತಿ.

ದೈನಂದಿನ ಚಿನ್ನ, ಬೆಳ್ಳಿ ದರ ಬದಲಾವಣೆಗೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 43,510 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,35,100 ರೂ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು ನೂರು ರೂ.ನಷ್ಟು ಏರಿಕೆ ಕಂಡಿದೆ.

Related Articles

24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 47,470 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,74,700 ರೂ ಆಗಿದೆ. ಬೆಳ್ಳಿದರದಲ್ಲಿ ಇಂದು ಯಾವುದೇ ಏರಿಳಿತ ಕಂಡುಬಂದಿಲ್ಲ. ಕೆಜಿ ಬೆಳ್ಳಿಗೆ 60,500 ರೂಪಾಯಿ ಮುಂದುವರೆದಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,56,500 ರೂ ಆಗಿದೆ. ಸುಮಾರು 900ರೂಪಾಯಿ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನ 49,800 ರೂ ಆಗಿದ್ದು, 100 ಗ್ರಾಂ ಚಿನ್ನ 4,98,000 ರೂ ಆಗಿದೆ.

ಚೆನ್ನೈ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು, 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,38,200 ರೂ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನ 47,800 ರೂ ಆಗಿದ್ದು, 100 ಗ್ರಾಂ ಚಿನ್ನ 4,78,000 ರೂ ಆಗಿದೆ.

ಮತ್ತಷ್ಟು ಏರಿಕೆಯಾದ ಪೆಟ್ರೋಲ್-ಡೀಸೆಲ್ ದರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button