Belagavi NewsBelgaum NewsKannada NewsKarnataka NewsLatestSports

*ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಇಂದೇ ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01/01/2024 ರಿಂದ 31/12/2024ರ ವರೆಗೆ) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅರ್ಹ ಕ್ರೀಡಾಪಟುಗಳು ಜನವರಿ, 31, 2026 ರ ಒಳಗಾಗಿ ಅಧಿಕೃತ ಜಾಲತಾಣ http://sevasindhu.karnataka.gov.in ಮೂಲಕ ಕಡ್ಡಾಯವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕ್ರೀಡಾಂಗಣ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರ ಕಚೇರಿ ಅಥವಾ ಕಚೇರಿಯ ದೂರವಾಣಿ ಸಂಖ್ಯೆ : 0831-2474101 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button