
ಪ್ರಗತಿವಾಹಿನಿ ಸುದ್ದಿ: ರೈತರ ಹಿತರಕ್ಷಣೆಗಾಗಿ ‘ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆ’ ಅಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 250 ರೂಪಾಯಿ ಸಹಾಯಧನ ನೀಡಲು ಸರ್ಕಾರ ನಿರ್ಧರಿಸಿದೆ.
ಬೆಲೆ ವ್ಯತ್ಯಾಸ ಪಾವತಿ ಯೋಜನೆ ವಿವರ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ದರ 1,900 ರೂಪಾಯಿ ಅಥವಾ ಅದಕ್ಕಿಂತ ಕಡಿಮೆ ಇದ್ದಾಗ, ರೈತರಿಗೆ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 250 ರೂಪಾಯಿ ವ್ಯತ್ಯಾಸದ ಮೊತ್ತ ಸಿಗಲಿದೆ. ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2,150 ರೂಪಾಯಿ ಮಾರುಕಟ್ಟೆ ಮಧ್ಯಪ್ರವೇಶ ದರ (MIP) ನಿಗದಿಪಡಿಸಿದೆ.


