Belagavi NewsBelgaum NewsEducationKannada NewsKarnataka News

*ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಬೆಳಗಾವಿಯಲ್ಲಿ ನಡೆಯಲಿದೆ ನೇರ ಸಂದರ್ಶನ ಮತ್ತು ಉದ್ಯೋಗ ಮೇಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಕಾ.ರಾ.ವಿ ಆಸ್ಪತ್ರೆ ಹಾಗೂ ಇಲ್ಲಿನ ಚಿಕಿತ್ಸಾಲಯಗಳಿಗೆ ಗುತ್ತಿಗೆ ಆಧಾರದ ಮೇಲೆ 5 ವಿಮಾ ವೈದ್ಯಾಧಿಕಾರಿಗಳನ್ನು (ಮೆರಿಟ್ ಕಮ್ ರೊಸ್ಟರ್) ಮೂಲಕ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು.

ಜೂನ್ 24 ರಂದು ಬೆಳಗ್ಗೆ 10.30 ರಿಂದ ಸಂಜೆ 4, ಗಂಟೆಯವರೆಗೆ ಬೆಳಗಾವಿಯ ಕಾ.ರಾ.ವಿ ಆಸ್ಪತ್ರೆಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23324216 / 23324218 ಗೆ ಸಂಪರ್ಕಿಸಬಹುದು ಎಂದು ಕಾ.ರಾ.ವಿ ಆಸ್ಪತ್ರೆ ವೈದ್ಯಕೀಯ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 22 ರಂದು ಮಿನಿ ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ ವತಿಯಿಂದ ಎಸ್‌ಎಸ್‌ಎಲ್‌ಸಿ, ಐಟಿಐ, ಪಿಯುಸಿ, ಪದವಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಜೂನ್ 22 (ಸೋಮವಾರ) ರಂದು “ಮಿನಿ ಉದ್ಯೋಗ ಮೇಳ” ವನ್ನು ಬೆಳಗಾವಿ ಶಿವಬಸವ ನಗರದ ಶ್ರೀ ಸಿದ್ದರಾಮೇಶ್ವರ ಎಜುಕೇಶನ್ ಟ್ರಸ್ಟ್ ಪ್ರೈವೇಟ್ ಐಟಿಐ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://tinyurl.com/3ka8s5pf ಈ ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 7975856566, 7899683036 ಗೆ ಕಛೇರಿ ಸಮಯದಲ್ಲಿ ಮಾತ್ರ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button