
ಪ್ರಗತಿವಾಹಿನಿ ಸುದ್ದಿ: 2026 ನೇ ಸಾಲಿನ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆಸುವುದಾಗಿ ಭಾರತೀಯ ಕ್ರಿಕೆಟ್ ಮಂಡಳಿ ತಿಳಿಸಿದ್ದು, ಈ ಮೂಲಕ ಆರ್ ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.
2026 ರ ಮಾರ್ಚ್ 26ರಿಂದ ಮೇ 31ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯಲಿದೆ.
ಐಪಿಎಲ್ ಸಂಪ್ರದಾಯದ ಪ್ರಕಾರ ಹಾಲಿ ಚಾಂಪಿಯನ್ ತಂಡದ ತವರು ಮೈದಾನದಲ್ಲಿ ಉದ್ಘಾಟನಾ ಪಂದ್ಯ ನಡೆಯುತ್ತಿತ್ತು. ಆದರೆ ಬೆಂಗಳೂರಿನ ಕಾಲ್ತುಳಿತ ಘಟನೆಯ ಕಾರಣ, ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯುವುದು ಅನುಮಾನವಾಗಿತ್ತು. ರಾಜ್ಯ ಸರ್ಕಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳಿಗೆ ಅನುಮತಿ ನೀಡಿದ್ದರೂ ಪಂದ್ಯಗಳು ನಡೆಯುವುದು ಅನುಮಾನವಾಗಿತ್ತು.
ಇದೀಗ ಬಿಸಿಸಿಐ ಗುಡ್ ನ್ಯೂಸ್ ಕೊಟ್ಟಿದ್ದು ಬೆಂಗಳೂರಲ್ಲಿ 2026 ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಕೆ ಎಸ್ ಸಿ ಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.
ಇನ್ನು ಐಪಿಎಲ್ ಮಾತ್ರವಲ್ಲದೆ ಅಂತರರಾಷ್ಟ್ರೀಯ ಪಂದ್ಯಗಳು ಕೂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಬಗ್ಗೆ ರಾಜ್ಯ ಸರ್ಕಾರದ ಜೊತೆ ಸಭೆ ನಡೆಸಿದ ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ.




