Kannada NewsKarnataka NewsLatest

*ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ; ಶಂಕಿತನ ರೇಖಾಚಿತ್ರ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋತ ಪ್ರಕರನಕ್ಕೆ ಸಂಬಂಧಿಸಿದಂತೆ ಸಿಸಿಬಿ ಹಾಗೂ ಎನ್ ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಬಂಬರ್ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಎನ್ ಐಎ ನಿನ್ನೆ ಬಂಬರ್ ನ ಫೋಟೋ ಬಿಡುಗಡೆ ಮಾಡಿತ್ತು. ಅಲ್ಲದೇ ಶಂಕಿತನ ಬಗ್ಗೆ ಸುಳಿವು, ಮಾಹಿತುಇ ನೀಡಿದರೆ 10 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಶಂಕಿತನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

ಇನ್ನೊಂದೆಡೆ ತುಮಕೂರಿನಲ್ಲಿ ಶಂಕಿತನಿಗಾಗಿ ಹುಡುಕಾಟ ನಡೆಸಲಾಗಿದೆ. ಮಾರ್ಚ್ 1ರಂದು ಶಂಕಿತ ತುಮಕೂರಿನಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ತುಮಕೂರಿಗೆ ತೆರಳಿ ಹಲವೆಡೆ ತೀವ್ರ ಶೋಧ ನಡೆಸಿದ್ದಾರೆ.

ಅಲ್ಲದೇ ರೈಲು ನಿಲ್ದಾಣ, ಬಸ್ ನಿಲ್ದಾಣ, ಪೊಲೀಸ್ ಕಂಟ್ರೋಲ್ ರೂಂ, ಪಾಲಿಕೆ ಕಚೇರಿ ಸೇರಿ ಹಲವೆಡೆ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button