*ಮಹಿಳೆಯರಿಗೆ ಗುಡ್ ನ್ಯೂಸ್*: *ಮಹಿಳಾ ಅಭಿವೃದ್ಧಿ ನಿಗಮದ ಐದು ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಐದು ಪ್ರಮುಖ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಉದ್ಯೋಗಿನಿ, ಚೇತನ, ಧನಶ್ರೀ ಸೇರಿದಂತೆ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಮಹಿಳೆಯರಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿ ರಾಅಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಯೋಜನೆಗಳ ಪ್ರಯೋಜನ ಬಯಸುವ ಮಹಿಳೆಯರು ಇದೀಗ 2026ರ ನವೆಂಬರ್ 30ರವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಐದು ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲ್ಲು ನವೆಂಬರ್.30, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ನಂ.18,ಕೃಷಿ ಭವನ,02ನೇ ಮಹಡಿ, ನೃಪತುಂಗ ರಸ್ತೆ. ಕ.ರಾ.ಮ.ಅ.ನಿ ಬೆಂಗಳೂರು ಅನ್ನು ಸಂಪರ್ಕಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


