Latest

ಒಂದು ವರ್ಷ ವರ್ಕ್ ಫ್ರಂ ಹೋಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಗೂಗಲ್ ತನ್ನೆಲ್ಲ ಉದ್ಯೋಗಿಗಳಿಗೆ ಮುಂದಿನ ವರ್ಷ ಜೂನ್ ಅಂತ್ಯದ ವರೆಗೆ ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದೆ.

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಭಾರತ ಸೇರಿ ವಿಶ್ವಾದ್ಯಂತ ಗೂಗಲ್ ಹಾಗೂ ಅಲ್ಫಾಬೆಟ್ ಸಂಸ್ಥೆಯ 2 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಇದು ಅನುಕೂಲವಾಗಲಿದ್ದು, 5 ಸಾವಿರಕ್ಕೂ ಕಡಿಮೆ ಉದ್ಯೋಗಿಗಳಿರುವ ಕಚೇರಿಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಿದೆ.

ಈ ಕುರಿತು ಗೂಗಲ್ ಹಾಗೂ ಅಲ್ಫಾಬೆಟ್ ಸಿಇಒ ಸುಂದರ್ ಪಿಚೈ ಉದ್ಯೋಗಿಗಳಿಗೆ ಇ-ಮೇಲ್ ಕಳುಹಿಸಿದ್ದು, ಮುಂದಿನ ಯೋಜನೆಗಳಿಗೆ ಉದ್ಯೋಗಿಗಳು ಶಕ್ತಿಯನ್ನು ನೀಡಬೇಕು, ನಾವು ವರ್ಕ್ ಫ್ರಮ್ ಹೋಮ್ ಅವಕಾಶವನ್ನು ಜೂನ್ 30, 2021ರ ವರೆಗೆ ಮುಂದುವರೆಸಿದ್ದೇವೆ. ಕಚೇರಿಗೆ ಬರಬೇಕೆಂದೇನಿಲ್ಲ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಈ ವರ್ಷಾಂತ್ಯದ ವರೆಗೆ ಕೆಲಸಕ್ಕೆ ಕಚೇರಿಗೆ ಮರಳುವುದು ಉದ್ಯೋಗಿಗಳ ವಿವೇಚೆನೆಗೆ ಬಿಟ್ಟಿದ್ದು ಎಂದು ಗೂಗಲ್ ತಿಳಿಸಿತ್ತು. ಆದರೆ ಈ ಅವಧಿಯನ್ನು ಇದೀಗ ಇನ್ನೂ 6 ತಿಂಗಳುಗಳ ಕಾಲ ಹೆಚ್ಚಿಸಿದೆ. ಮುಂದಿನ ವರ್ಷ ಜೂನ್ ಅಂತ್ಯದ ವರೆಗೆ ಕಚೇರಿಗೆ ಬರುವುದು ಉದ್ಯೋಗಿಗಳ ವಿವೇಚನೆಗೆ ಬಿಟ್ಟದ್ದು ಎಂದು ಗೂಗಲ್ ತಿಳಿಸಿದೆ. ವಿವಿಧ ದೇಶಗಳಲ್ಲಿ ಕೊರೊನಾ ಮಹಾಮಾರಿ ವ್ಯಾಪಿಸುತ್ತಿರುವುದರಿಂದ ಗೂಗಲ್ ಈ ನಿರ್ಧಾರ ಕೈಗೊಂಡಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button