
ಸಹೋದರಿ ಎಂದು ಹೇಳಿಕೊಂಡಿದ್ದ ವಿಜಯಲಕ್ಷ್ಮೀ ಪೊಲೀಸ್ ವಶಕ್ಕೆ
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆಪ್ತರ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿ ಎಂದು ಹೇಳಿಕೊಂಡಿದ್ದ
ವಿಜಯಲಕ್ಷ್ಮೀ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದಿದ್ದಾರೆ ಎಂದು ಆರೋಪಿ ಗೋಪಾಲ್ ಜೋಶಿ ವಿರುದ್ಧ ದೇವಾನಂದ್ ಚೌವ್ಹಾಣ್ ಪತ್ನಿ ಸುನೀತಾ ಚೌವ್ಹಾಣ್ ಪ್ರಕರಣ ದಾಖಲಿಸಿದ್ದರು. ಗೋಪಾಲ್ ಜೋಶಿ, ಪುತ್ರ ಅಜಯ್ ಜೋಶಿ ಹಾಗೂ ಸಹೋದರ ಎಂದು ಹೇಳಿಕೊಂಡಿರುವ ವಿಜಯಲಕ್ಷ್ಮೀ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೋಪಾಲ್ ಜೋಶಿ ನನ್ನ ಸಹೋದರನಾಗಿದ್ದರೂ, ಕಳೆದ 32 ವರ್ಷಗಳಿಂದ ಆತನ ಜೊತೆ ನನಗೆ ಯಾವುದೇ ಸಂಪರ್ಕವಿಲ್ಲ. ವಂಚನೆ ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಈ ಪ್ರಕರಣಕ್ಕೂ ನನಗೂ ಹಾಗೂ ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ