Belagavi NewsBelgaum NewsKannada NewsKarnataka NewsNationalPolitics

*ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಏ. 28 ರಂದು ಬೃಹತ್‌ ಸಮಾವೇಶ; ಗೋಪಿನಾಥ್  ಪಳನಿಯಪ್ಪನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರಕಾರದ ನೀತಿಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ವತಿಯಿಂದ  ಏ.28  ರಂದು ಬೃಹತ್‌ ಪ್ರತಿಭಟನಾ ಸಮಾವೇಶವನ್ನು ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ‌ ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ್  ಪಳನಿಯಪ್ಪನ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ದೇಶದ  ಜನರಿಗೆ ನಿಜಾಂಶ ತಿಳಿಸಬೇಕು. ಹೀಗಾಗಿ ಸಮಾವೇಶ ‌ನಡೆಸುತ್ತಿದ್ದೆವೆ.  ಆಡಳಿತ ಸರ್ಕಾರದ ಬಗ್ಗೆ ಸುಳ್ಳು ಭಾಷಣ ಮಾಡುವ ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಕಿಡಿ ಕಾರಿದರು. 

Home add -Advt

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ಆರ್ಥಿಕವಾಗಿ ಪ್ರಗತಿ ಹೊಂದುತ್ತಿದ್ದಾರೆ. ಗ್ಯಾರಂಟಿ ಯೋಜನೆ ಮದ್ಯಮ, ಕೆಳ ವರ್ಗದ ಮಹಿಳೆಯರಿಗೆ ಅನುಕೂಲವಾಗಿದೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದರೆ ಕಾಂಗ್ರೆಸ್ ಸರ್ಕಾರ  ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಹಾಯ ಮಾಡಿದೆ. ಸಚಿವ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಯಲಿದೆ‌. ಇದರಿಂದ ದೇಶದ ಜನರಿಗೆ ಒಳ್ಳೆಯ ‌ಸಂದೇಶ ರವಾನೆಯಾಗಲಿದೆ. ಈಗಾಗಲೇ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಅದರಂತೆ,  ಬೆಳಗಾವಿಯಲ್ಲೂ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದರು.

 ಬಿಜೆಪಿಯವರು ಕೇಂದ್ರ ಸರ್ಕಾರದ ಬೆಲೆ ಏರಿಕೆ , ವೈಫಲ್ಯಗಳನ್ನು ಮರೆಮಾಚಲು  ಜನಾಕ್ರೋಶ ಪ್ರತಿಭಟನೆ ಮಾಡುತ್ತಿದ್ದಾರೆ.  ಸುಳ್ಳನ್ನು ಹೇಳಿ ಜನರನ್ನು ಮರುಳು ಮಾಡುತ್ತಿದ್ದಾರೆ. ಹೀಗಾಗಿ ನಾವು ಕೇಂದ್ರ ಸರ್ಕಾರ ವಿರುದ್ಧ ಬೆಲೆ ಏರಿಕೆ, ಸಂವಿಧಾನ ಬಚಾವೋ ಆಂದೋಲನ ಹಮ್ಮಿಕೊಂಡಿದ್ದೇವೆ. ಈ ಬೃಹತ್ ಸಮಾವೇಶಕ್ಕೆ  ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,  ಕಾಂಗ್ರೆಸ್ ವರಿಷ್ಠ ನಾಯಕರು, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆಶಿವಕುಮಾರ್ ಹಾಗೂ ರಾಜ್ಯದ ಘಟಾನುಘಟಿ ನಾಯಕರು ಆಗಮಿಸಲಿದ್ದಾರೆ. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ರಾಜು ಸೇಠ, ಜಿಲ್ಲಾ ಅಧ್ಯಕ್ಷರಾದ ವಿನಯ ನಾವಲಗಟ್ಟಿ,  ಸುನೀಲ ಹನ್ನಣ್ಣನವರ , ಕೆಪಿಸಿಸಿ ಕಾರ್ಯದರ್ಶಿ ಸದಾನಂದ ವಿ. ಡಂಗನ್ನವರ ಹಾಗೂ ಇತರರು ಇದ್ದರು.

Related Articles

Back to top button