Latest

ಗೋವಾ ಚುನಾವಣಾ ಫಲಿತಾಂಶ: ತುರ್ತು ಸಭೆ ಕರೆದ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಪಣಜಿ: ಗೋವಾ ವಿಧಾನಸಭಾ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಒಮ್ಮೆ ಬಿಜೆಪಿ ಮುನ್ನಡೆ ಸಾಧಿಸಿದರೆ, ಮತ್ತೊಮ್ಮೆ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಗೋವಾದಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಸಾಧ್ಯತೆ ಇದೆ.

ಗೋವಾದಲ್ಲಿ ಅತಂತ್ರ ಫಲಿತಾಂಶ ಸಾಧ್ಯತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಮಧ್ಯಾಹ್ನ 1 ಗಂಟೆಗೆ ತುರ್ತು ಸಭೆ ಕರೆದಿದ್ದಾರೆ.

Home add -Advt

ಮತ್ತೊಂದೆಡೆ ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರ ತಡೆಗಟ್ಟುವ ನಿಟ್ಟಿನಲ್ಲಿ ಗೋವಾದ ಗ್ರೇಸ್ ಮೆಜೆಸ್ಟಿಕ್ ಹೋಟೆಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಇರಿಸಲಾಗಿದ್ದು, ಹೋಟೆಲ್ ಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಪ್ರಸ್ತುತ ಗೋವಾದಲ್ಲಿ ಬಿಜೆಪಿ 18 ಹಾಗೂ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪಂಜಾಬ್ ನಲ್ಲಿ ಆಮ್ ಆದ್ಮಿ ಸರ್ಕಾರ ಖಚಿತ

ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ಆದಿತ್ಯನಾಥ್ ಸರ್ಕಾರ

Related Articles

Back to top button