Kannada NewsKarnataka NewsLatest
ಸರಕಾರದ ದುರುದ್ದೇಶ ಸರಕಾರದಿಂದಲೇ ಸಾಬೀತಾಗಿದೆ ಎಂದ ಸತೀಶ್ ಜಾರಕಿಹೊಳಿ; ಏನದು? ಈ ಸುದ್ದಿ ಓದಿ
ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಗೋಕಾಕ: ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದರು.
ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಯಶಸ್ವಿ ಆಗಬಾರದು, ಪಾದಯಾತ್ರೆ ಬೆಂಗಳೂರು ತಲುಪಬಾರದು ಎಂಬ ಉದ್ದೇಶ ಸರ್ಕಾರದಾಗಿತ್ತು. ಈಗ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಅದನ್ನು ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ ಎಂದರು.
ಬಿಜೆಪಿ ಸರ್ಕಾರ ಪಾದಯಾತ್ರೆ ಹತ್ತಿಕ್ಕಲು ಪ್ರಯತ್ನಿಸಿದರೂ ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಪಾದಯಾತ್ರೆ ಶಾಶ್ವತವಾಗಿ ಉಳಿದಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರು ಕೋವಿಡ್ ಕಡಿಮೆಯಾದ ನಂತರ ಪಾದಯಾತ್ರೆ ಎಲ್ಲಿಂದ ಮೊಟಕುಗೊಂಡಿತ್ತು ಮತ್ತೆ ಅಲ್ಲಿಂದ ಆರಂಭಿಸೋಣ ಎಂದು ತಿಳಿಸಿದ್ದಾರೆ ಎಂದರು.
ಸರ್ಕಾರಕ್ಕೆ ಕಾಂಗ್ರೆಸ್ ಬಗ್ಗೆ ಭಯ ಹುಟ್ಟಿದ್ದು, ಆದಕಾರಣ ಇಂತಹ ಹೋರಾಟಗಳನ್ನು ತಡೆಗಟ್ಟಲು ಕುತಂತ್ರ ರೂಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ವಚ್ಛತಾ ಕಾರ್ಯ ವೀಕ್ಷಿಸಿದ ಸತೀಶ್ ಜಾರಕಿಹೊಳಿ
ಕಳೆದ ಆರು ತಿಂಗಳಿಂದ ಪ್ರತಿ ಭಾನುವಾರ ನಗರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದ ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳದಲ್ಲಿಯೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಸ್ಯರು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಅದನ್ನು ವೀಕ್ಷಿಸಲಾಯಿತು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರ ಸಮಸ್ಯೆ ಆಲಿಸಿ, ಅವುಗಳನ್ನುಸರಿಪಡಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದರು.
ಯುವಕರ ಪಾಲಿನ ಸ್ಪೂರ್ತಿ ಚಿಲುಮೆ ಸುಭಾಷ್ ಚಂದ್ರ ಬೋಸ್:
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು, ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪೋರ್ಟ್ ಬ್ಲೇರ್ ನಲ್ಲಿ ಪ್ರಥಮ ಬಾರಿಗೆ ತ್ರಿವರ್ಣಧ್ವಜಾರೋಹಣ ಮಾಡಿದ ಸವಿನೆನಪಿಗೆ 75 ವರ್ಷ ಸಂದಿದೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ರನ್ನು ನಿರಂತರ ನೆನೆಯುವ ಕಾರ್ಯವಾಗಲಿ:
ಬ್ರಿಟಿಷರಿಂದ ದಾಸ್ಯದಿಂದ ಮುಕ್ತಗೊಂಡ ಭಾರತದ ಪ್ರಥಮ ಭೂ ಪ್ರದೇಶ ಎಂದು ಸ್ವಾತಂತ್ಯದ ಘೋಷಣೆ ಮಾಡಿದ್ದರು. ಡಿಸೆಂಬರ್ 30, 1943ರಂದು ಭಾರತೀಯ ರಾಷ್ಟ್ರೀಯ ಸೇನೆ ಹಾಗೂ ಭಾರತೀಯ ಹೆಮ್ಮೆಯಾಗಿದೆ. ಅವರ ದಿಟ್ಟ ನಡೆ, ಹೋರಾಟ ರಾಷ್ಟ್ರಕ್ಕಾಗಿ ಅನೇಕ ಉಪವಾಸ ಸತ್ಯಾಗ್ರಹ ಮಾಡಿದ ಸೇನಾನಿ ನೇತಾಜಿ ಅವರು, ಯುವಕರ ಪಾಲಿನ ಸ್ಪೂರ್ತಿ ಚಿಲುಮೆ ಸುಭಾಷ್ ಚಂದ್ರ ಬೋಸ್ , ಇಂದಿನ ಯುವಕರು ನೇತಾಜಿ ಮಾರ್ಗದಲ್ಲಿ ಸಾಗಬೇಕಿದೆ ಎಂದರು.
ಭಾರತದ ಪಾಲಿಗೆ ನೇತಾಜಿಯವರ ಅದಮ್ಯ ಚೇತನ. ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸಲು ನಿರಂತರ ನೆನೆಯುವ ಕಾರ್ಯವಾಗಬೇಕಿದೆ. ಬೋಸ್ ಮಾಡಿರುವ ಸಾಧನೆಗಳನ್ನು ಸಾರುವುದರ ಜೊತೆ ಯುವಕರಲ್ಲಿ ಸ್ಪೂರ್ತಿ ತುಂಬುವ ಉದ್ದೇಶವಿದೆ. ದೇಶದ ಯುವಕರು ನಿಜವಾದ ಪಕ್ಷಪಾತದ ಬಗ್ಗೆ ಅರ್ಥಮಾಡಿಕೊಳ್ಳಬೇಕಾದರೆ ನೇತಾಜಿ ಸುಭಾಷ್ ಚಂದ್ರ ಬೋಸ್ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ