Karnataka News

*ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ : ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ಸಂಭವಿಸಿದೆ.

ರಾಮನಗರದ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ.

ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ. ಕ್ಯಾಂಟ‌ರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಬಸ್‌ ಕ್ಯಾಂಟರ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ಗೊತ್ತಾಗಿದೆ. ಸದ್ಯ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button