
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸರ್ಕಾರಿ ಬಸ್ ಪಲ್ಟಿಯಾದ ಘಟನೆ ನಡೆದಿದೆ.
ಸಾರಿಗೆ ಬಸ್ ಏಣಗಿ ಗ್ರಾಮದಿಂದ ಬೈಲಹೊಂಗಲ ಕಡೆ ಲಿಂಗದಳ್ಳಿ ಮಾರ್ಗವಾಗಿ ಹೋಗುವಾಗ ಅರವಳ್ಳಿ ಬಳಿ ಉರುಳಿ ಬಿದ್ದಿದೆ. ಬಸ್ಸಿನಲಿದ್ದ ಸುಮಾರು 10 ರಿಂದ 15 ಜನಕ್ಕೆ ಸಣ್ಣಪುಟ್ಟಗಾಯಗಳಾಗಿದ್ದು ಅರವಳ್ಳಿ ಗ್ರಾಮಸ್ಥರ ಸಹಕಾರ ಹಾಗೂ 108 ಆಂಬುಲೆನ್ಸ್ ಮೂಲಕ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ