ಪ್ರಗತಿವಹಾನಿ ಸುದ್ದಿ, ಬೆಂಗಳೂರು: 3 ಬೇಡಿಕೆಗಳನ್ನು ಮುಂದಿಟ್ಟು ಸರಕಾರದೊಂದಿಗೆ ಅಸಹಕಾರ ಚಳವಳಿ ನಡೆಸಲು ಮುಂದಾಗಿರುವ ಸರಕಾರಿ ನೌಕರರ ಸಂಘ ಸರಕಾರದೊಂದಿಗೆ ನೇರ ಸಂಘರ್ಷಕ್ಕಿಳಿಯಲು ನಿರ್ಧರಿಸಿದೆ. ಈ ಕುರಿತು ಈಗಾಗಲೆ ಪೂರ್ವ ಸಿದ್ಧತೆ ಆರಂಭಿಸಿದೆ.
ಚಿಕ್ಕಮಗಳೂರಿನಲ್ಲಿ ಭಾನುವಾರ ಮೊದಲ ಸಮಾವೇಶ ನಡೆದಿದ್ದು, 7ನೇ ವೇತನ ಆಯೋಗದ ವರದಿ ಜಾರಿ ಮಾಡದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಹಾಗಾಗಿ ಜುಲೈ ಅಂತ್ಯ ಇಲ್ಲವೇ ಆಗಷ್ಟ್ ಮೊದಲ ವಾರ ಪ್ರತಿಭಟನೆ ಆರಂಭಿಸಬೇಕು ಎಂದು ನಿರ್ಧರಿಸಲಾಗಿದೆ. ಆರಂಭದಲ್ಲಿ ಅಸಹಕಾರ ಚಳವಳಿ ನಡೆಸಲು ಚಿಂತನೆ ನಡೆಸಿದೆ.
ಈ ಬಾರಿ ಮುಷ್ಕರ ಕುರಿತು ಅತ್ಯಂತ ಕಠಿಣವಾದ ನಿರ್ಧಾರ ತೆಗೆದುಕೊಳ್ಳಬೇಕು. ಎಸ್ಮಾ ಜಾರಿಯಾದರೂ ಹೆದರಬಾರದು ಎಂದು ಕರೆ ನೀಡಲಾಗಿದೆ. ಪ್ರಮುಖವಾಗಿ 3 ನಿರ್ಧಾರದೊಂದಿಗೆ ಪ್ರತಿಭಟನೆ ಆರಂಭಿಸಲು ನಿರ್ಧರಿಸಲಾಗಿದೆ. 7ನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಯಲಿದೆ.
7ನೇ ವೇತನ ಆಯೋಗ ನೀಡಿರುವ ವರದಿ ಆಧರಿಸಿ ಹಿಂದಿನ ಸರಕಾರ ಶೇ.17ರಷ್ಟು ಮಧ್ಯಂತರ ಪರಿಹಾರ ನೀಡಿದೆ. ಒಟ್ಟಾರೆ ಅಂದಾಜು ಶೇ.27ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ