Kannada NewsKarnataka NewsLatestPolitics

*ಪ್ರತಿಭಟನೆಗೆ ಮಣಿದ ಸರ್ಕಾರ: 24 ಸಾವಿರ ಹುದ್ದೆಗಳ ನೇಮಕಾತಿಗೆ ಮಂಜೂರಾತಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ಕಾವು ಹೆಚ್ಚಾದಂತೆ ಕರ್ನಾಟಕ ಆರ್ಥಿಕ ಇಲಾಖೆ 24 ಸಾವಿರ ಹುದ್ದೆಗಳ ನೇಮಕಾತಿಗೆ ಮಂಜೂರಾತಿ ನೀಡಿದೆ.

ಕರ್ನಾಟಕದ ವಿವಿಧ ಒಟ್ಟು 32 ಇಲಾಖೆಯಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ. ಎ ದರ್ಜೆಯ 542 ಹುದ್ದೆ ಬಿ ದರ್ಜೆಯ 619 ಹುದ್ದೆ ಹಾಗೂ ಎಫ್ ಡಿ ಸಿ ದರ್ಜೆಯ 23119 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಕ್ಲಿಯರೆನ್ಸ್ ನೀಡಿದೆ.

Home add -Advt

ರಾಜ್ಯದ ವಿವಿಧ ಇಲಾಖೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿದ್ದು, ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಈ ಹಿಂದೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದರು. 

ಇನ್ನು ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಇದು ಅನ್ವಯವಾಗಲಿದೆ. 

Related Articles

Back to top button