*ದರ್ಶನ್ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಣಿಸಿದೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಜೈಲಿನಲ್ಲಿರುವ ನಟ ದರ್ಶನ್‌ಗೆ ಯಾವುದೇ ವಿನಾಯಿತಿ, ವಿಶೇಷ ಸೌಲಭ್ಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಂಗಳವಾರ ಹೇಳಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ದೊರೆತಿರುವ ಬಗ್ಗೆ ಸರ್ಕಾರದ ನಿಲುವನ್ನು ಪ್ರಕಟಿಸಿದ ಸಚಿವ ಪಾಟೀಲ್, “ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ವ್ಯವಸ್ಥೆ ಎಲ್ಲರಿಗೂ ಒಂದೇ,”ಎಂದು ಪ್ರತಿಪಾದಿಸಿದರು.
“ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ. ವ್ಯವಸ್ಥೆ ಎಲ್ಲರಿಗೂ ಒಂದೇ ಆಗಿರುಬೇಕು. ಜೈಲು ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು. ಇಂತಹ ಲೋಪಗಳಿಗೆ ಅವಕಾಶ ನೀಡಬಾರದು, ವಿಐಪಿಗಳು ಜೈಲು ಪಾಲಾದಾಗ ಇಂತಹ ವಿಷಯಗಳು ಸುದ್ದಿಯಾಗುತ್ತವೆ. ಇಂತಹ ಲೋಪಗಳಿಂದ ಜನರು ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ. ಇಂತಹ ಲೋಪಗಳು ಮರುಕಳಿಸದಂತೆ ಗೃಹ ಸಚಿವರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ,’’ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ