PoliticsTravel

*ಹಂಪಿಯಲ್ಲಿ ನಡೆದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ : ಹಂಪಿಯಲ್ಲಿ ನಡೆದ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ, ವಿದೇಶಿ ಪ್ರವಾಸಿಗರ ಹಲ್ಲೆ ಹಾಗೂ ಓರ್ವ ಸ್ವದೇಶಿ ಪ್ರವಾಸಿಗನ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಪ್ರಾರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೂ ಸಹ ಪಡೆಯಲಾಗಿದೆ ಎಂದು ಹೇಳಿದರು.

ಇದೇ ವೇಳೆ ಕರ್ನಾಟಕ ಬಜೆಟ್ ಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಲ್ಪಸಂಖ್ಯಾತರೆಂದರೆ ಸಿಖ್, ಬೌದ್ಧ ಜೈನ, ಕ್ರೈಸ್ತರೆಲ್ಲೂ ಸಹ ಇದ್ದಾರೆ. ಆದರೆ ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿದೆ. ಸಮಾಜವನ್ನು ಒಡೆಯುವ ಮೂಲಕ ಶಾಂತಿ ಕದಡುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button