Kannada NewsKarnataka NewsNational

*ಸಾರಿಗೆ ನೌಕರರಿಗೆ ನೋ ವರ್ಕ್ ನೋ ಪೇ’ ನಿಯಮ ಜಾರಿ ಮಾಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ತೊಡೆ ತಟ್ಟಿರುವ ರಾಜ್ಯ ಸಾರಿಗೆ ನೌಕರರಿಗೆ ಸರ್ಕಾರಕ ಮತ್ತೆ ಶಾಕ್ ನೀಡಿದೆ.ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.

Home add -Advt

ಪ್ರತಿಭಟನೆಯಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ನಿಯಮವನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಶೇ. 25 ರಷ್ಟು ವೇತನ ಹೆಚ್ಚಳ ಹಾಗೂ 38 ತಿಂಗಳ ಬಾಕಿ ವೇತನ ಬಿಡುಗಡೆಗೆ ಪಟ್ಟು ಹಿಡಿದಿದೆ. ಆದರೆ ಸರ್ಕಾರ ಘೋಷಿಸಿರುವ ಶೇ. 12.5 ರಷ್ಟು ವೇತನ ಪರಿಷ್ಕರಣೆಯನ್ನು ನೌಕರರು ತಿರಸ್ಕರಿಸಿದ್ದಾರೆ.

ಮುಷ್ಕರದ ದಿನದಂದು ಕರ್ತವ್ಯಕ್ಕೆ ಬಾರದ ನೌಕರರಿಗೆ ಅಂದು ಯಾವುದೇ ವೇತನ ನೀಡುವುದಿಲ್ಲ ಮತ್ತು ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಎಚ್ಚರಿಸಿದ್ದಾರೆ. 

ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮೇ 20 ರಿಂದ ಜಾರಿಗೆ ಬರುವಂತೆ ಅತ್ಯಂತ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ನೌಕರರಿಗೆ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು. ಅವಶ್ಯಕತೆ ಬಿದ್ದಲ್ಲಿ ವಾರದ ರಜೆಯನ್ನೂ ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಬಹುದು ಎಂದು ಸೂಚನೆ ನೀಡಲಾಗಿದೆ. ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತಡೆಯಲು ಸಾರಿಗೆ ಇಲಾಖೆ ಈ ಕಠಿಣ ಕ್ರಮಕ್ಕೆ ಮುಂದಾಗಿದೆ.

ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರುಹಾಜರಾಗುವ ನೌಕರರ ದಿನವಹಿ/ಘಟಕವಾರು ಪಟ್ಟಿಯನ್ನು ಸಿದ್ಧಪಡಿಸಿ, ಅಂದಿನ ವೇತನವನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಜನಸಾಮಾನ್ಯರ ಹಿತದೃಷ್ಟಿಯಿಂದ ನೌಕರರು ಯಾವುದೇ ಕಾರಣಕ್ಕೂ ಮುಷ್ಕರದಲ್ಲಿ ಭಾಗವಹಿಸದೆ, ತಮ್ಮ ದೈನಂದಿನ ಕರ್ತವ್ಯಕ್ಕೆ ಹಾಜರಾಗಬೇಕಾಗಿ ಕೆಎಸ್‌ಆರ್‌ಟಿಸಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ವಿನಂತಿಸಿದೆ.

Related Articles

Back to top button