Karnataka News

25 ಸದಸ್ಯರ ನಿವೃತ್ತಿಗೆ ಮುನ್ನ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ – ಸಿಎಂಗೆ ಹೊರಟ್ಟಿ ಪತ್ರ

25 ಜನ ಸದಸ್ಯರು 2022 ರ ಜನೆವರಿ 5 ರಂದು ನಿವೃತ್ತಿ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ನವ್ಹೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ 25 ಜನ ಸದಸ್ಯರು 2022 ರ ಜನೆವರಿ 5 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಬಾರಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ  ನಡೆಸುವ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ  ಚರ್ಚಿಸಲಾಗಿದ್ದು ಅವರು  ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

Home add -Advt

ಅಲ್ಲದೇ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟಗೊಂಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನವ್ಹಂಬರ್ ತಿಂಗಳಾಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ  ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಮುಖೇನ ಒತ್ತಾಯಿಸಿದ್ದಾರೆ.

ಇದರಿಂದ ಜನೆವರಿ ಮೊದಲ ವಾರದಲ್ಲಿ ನಿವೃತ್ತಿಗೊಳ್ಳಲಿರುವ 25 ಜನ ವಿಧಾನ ಪರಿಷತ್ತಿನ ಸದಸ್ಯರಿಗೆ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದ್ದು, ಅದರಿಂದ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅವರಿಗೆ  ಅನುಕೂಲವಾಗುವುದು. ಈ ನಿಟ್ಟಿನಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುವ ದಿನಾಂಕವನ್ನು ಮೊದಲೇ ಪ್ರಕಟಿಸುವಂತೆ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳನ್ನು  ಕೋರಿದ್ದಾರೆ.

ಕಾವೇರುತ್ತಿದೆ ವಿಧಾನಪರಿಷತ್ ಚುನಾವಣೆ : ಹಲವು ಲೆಕ್ಕಾಚಾರ

 

Related Articles

Back to top button