ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಕೋವಿಡ್ ನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲವಂತೆ!
ಹೀಗೆಂದು ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ ಅವರು ಪ್ರಶ್ನೆಯೊಂದಕ್ಕೆ ಲಿಖಿತವಾಗಿ ಉತ್ತರಿಸಿದ್ದಾರೆ.
“ಅಂಗನವಾಡಿ ಸೇವೆಗಳು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಂದ ಜಾರಿಗೊಳಿಸಲಾದ ಯೋಜನೆಯಾಗಿರುವುದರಿಂದ, ಕೊರೊನಾ ವೈರಸ್‌ನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರ ಸಂಖ್ಯೆಯ ಮಾಹಿತಿ ತಮ್ಮ ಸಚಿವಾಲಯದಲ್ಲಿ ಲಭ್ಯವಿಲ್ಲ” ಎಂದು ಸ್ಮೃತಿ ಇರಾನಿ ಹೇಳಿಕೊಂಡಿದ್ದಾರೆ.
ದೇಶದಲ್ಲಿ ಕೋವಿಡ್ ತಾಂಡವಾಡುತ್ತಿರುವ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಅದರ ನಿಯಂತ್ರಣ ಕಾರ್ಯದಲ್ಲಿ ಶ್ರಮಿಸುವ ಮೂಲಕ ‘ಕೊರೊನಾ ವಾರಿಯರ್’ಗಳೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ವಿದ್ಯಾರ್ಥಿನಿ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ