

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ಕ್ಕೆ ರಾಜ್ಯ ಸರಕಾರ ಬಿಗ್ ಶಾಕ್ ನೀಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರವನ್ನು ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.
ಆರ್ ಎಸ್ಎಸ್ ಸಂಘಟನೆ ಸರಕಾರಿ, ಅನುದಾನಿತ ಹಾಗೂ ಅರೆ ಸರಕಾರಿ ಜಾಗಗಳನ್ನು ಬಳಸಿಕೊಂಡು ಶಾಖೆಗಳನ್ನು ನಡೆಸುತ್ತಿದೆ. ಜೊತೆಗೆ ಮಕ್ಕಳು ಹಾಗೂ ಯುವಜನರ ಮನಸ್ಸಿನಲ್ಲಿ ಭಾರತ ವಿರೋಧಿ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬುತ್ತಿದೆ. ಪೊಲೀಸ್ ಇಲಾಖೆಯ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನಗಳನ್ನು ಮಾಡುತ್ತ ಮುಗ್ದ ಮಕ್ಕಳು ಹಾಗೂ ಯುವಜನರ ಮನಸ್ಸಿನಲ್ಲಿ ದುಷ್ಪರಿಣಾಮ ಉಂಟು ಮಾಡಲಾಗುತ್ತಿದೆ. ನಾಡಿನ ಮಕ್ಕಳು ಹಾಗೂ ಸಾಮಾಜಿಕ ಸ್ವಸ್ಥ್ಯ ಕಾಪಾಡುವ ದೃಷ್ಟಿಯಿಂದ ಸರಕಾರಿ, ಅನುದಾನಿತ, ಅರೆ ಸರಕಾರ, ಪುರಾತತ್ವ ಕಟ್ಟಡಗಳನ್ನು ಆರ್ ಎಸ್ಎಸ್ ಶಾಖೆಗಳನ್ನು, ಬೈಠಕ್ ಗಳನ್ನು ನಡೆಸುವ ಎಲ್ಲ ಬಗೆಯ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದಾರೆ.
ಇದಕ್ಕೆ ಶರಾ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.