*ಒಂದು ದಿನದ ವೇತನ ಸಹಿತ ರಜೆ ನೀಡಲು ಸರ್ಕಾರದ ಆದೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರ ರಾಜ್ಯದ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯು ಘೋಷಣೆಯಾಗಿದ್ದು, ನ.20 ದಂದು ಮತದಾನ ನಡೆಯಲಿದೆ.
ಮಹಾರಾಷ್ಟ್ರ ರಾಜ್ಯವು ಕರ್ನಾಟಕ ರಾಜ್ಯದ ನೆರೆ ರಾಜ್ಯವಾಗಿರುವುದರಿಂದ ಮಹಾರಾಷ್ಟ್ರ ರಾಜ್ಯದಲ್ಲಿ ಮತದಾರರಾಗಿರುವವರು ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಧ್ಯತೆ ಇರುತ್ತದೆ. ಆದ್ದರಿಂದ ರಾಜ್ಯದ ಗಡಿಭಾಗದ ಜಿಲ್ಲೆಗಳಾದ ಬೀದರ್, ವಿಜಯಪುರ, ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿನ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳು, ಶಾಲಾ ಕಾಲೇಜುಗಳು, ರಾಷ್ಟ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಾರಾಷ್ಟ್ರ ರಾಜ್ಯದ ಅರ್ಹ ಮತದಾರರಿಗೆ ಮಾತ್ರ ಸೀಮಿತವಾಗಿ ಮತದಾನ ಮಾಡಲು ಒಂದು ದಿನದ ವೇತನ ಸಹಿತ ರಜೆಯನ್ನು ನೀಡಲು ಆದೇಶಿಸಿದೆ.
ಮಹಾರಾಷ್ಟ್ರದ ಅರ್ಹ ಮತದಾರರಿಗೆ ಮಾತ್ರ Negotiable Instrument Act 1881, 0 2500 2 Representation of People Act, 1951 0 135 4 ಎಲ್ಲಾ ಉಪಬಂದಗಳನ್ವಯ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಷರತ್ತಿಗೊಳಪಟ್ಟು ಒಂದು ದಿನದ ವೇತನ ಸಹಿತ ರಜೆಯನ್ನು ನೀಡಲು ಆದೇಶಿಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ-1 ಪ್ರಕಟಣೆಯಲ್ಲಿ ತಿಳಿಸದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ