*ಶಾಸಕ ಬಿ.ಆರ್ ಪಾಟೀಲ್ ಗೆ ಸಂಪುಟ ದರ್ಜೆ ಸ್ಥಾನ ನೀಡಿ ಸರ್ಕಾರ ಆದೇಶ*

ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಕಲಬುರಗಿಯ ಆಳಂದ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಅವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಬಿ.ಆರ್.ಪಾಟೀಲ್ ಅವರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ನೀಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನವನ್ನು ಸರ್ಕಾರ ಇದೀಗ ನೀಡಿದ್ದು ಪಾಟಿಲ್ ಅವರ ಬಂಡಾಯಕ್ಕೆ ಬ್ರೇಕ್ ಹಾಕಲು ಸರ್ಕಾರ ಯತ್ನಿಸಿದೆ. ಸಂಪುಟ ದರ್ಜೆ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಕಳೆದ ಫೆ.1ರಂದು ಪಾಟೀಲರು ಸಿಎಂ ಅವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇನ್ನು 2023ರಲ್ಲಿ ಅನೇಕ ಸಚಿವರ ವಿರುದ್ಧ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದ್ದ ಪಾಟೀಲರು, ಬಹಿರಂಗವಾಗಿಯೇ ಸಿಎಂಗೆ ಪತ್ರ ಬರೆದಿದ್ದರು.
ಈ ಬಾರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ಸಹ ಸಿಎಂ ಕಾರಣರಾಗಿದ್ದರು. ಇದಾದ ಬೆನ್ನಲ್ಲೇ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನ ಹೊಂದಿದ್ದರು. ಸಚಿವ ಸ್ಥಾನ ವಂಚಿತರಾದ ನಂತರ ಆಗಾಗ ಬಹಿರಂಗವಾಗಿ ಬೇಸರ ಹೊರಹಾಕುತ್ತಿದ್ದರು.
ಕಾಂಗ್ರೆಸ್ ಸರ್ಕಾರದಲ್ಲಿ ಆಕ್ರೋಶ ಹೊರಹಾಕಿ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಕಲಬುರಗಿಯ ಆಳಂದ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಅವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ