
ಪ್ರಗತಿವಾಹಿನಿ ಸುದ್ದಿ: ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಇದೀಗ ಈ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿರುವ ಸೇನೆಗೆ ಅಭಿನಂದನೆ ಸಲ್ಲಿಸಿರುವ ಸಚಿವರು, ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಮೂಲಕ ನಮ್ಮ ಸೈನ್ಯಕ್ಕೆ ಹೆಚ್ಚಿನ ಬಲ ನೀಡಲು ಮತ್ತು ಸೈನಿಕರಿಗೆ ಬೆಂಬಲ ಸೂಚಿಸಲು ಆದೇಶಿಸಿದ್ದಾರೆ.
ಈ ಬೆನ್ನಲ್ಲೇ ಮುಜರಾಯಿ ಇಲಾಖೆ ಆಯುಕ್ತರಾದ ಎಂ.ವಿ. ವೆಂಕಟೇಶ್, ಸುತ್ತೋಲೆ ಹೊರಡಿಸಿದ್ದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಮ್ಮ ಸೈನಿಕರಿಗೆ ಶಕ್ತಿ ತುಂಬಲು ಬೇಡಿಕೊಳ್ಳುವಂತೆ ತಿಳಿಸಿದ್ದಾರೆ. ಅದರಂತೆ ರಾಜ್ಯದ ಸುಮಾರು 35,000 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜನೆ ಮಾಡಲಾಗಿದೆ.
