ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರ ಉಳಿಯುತ್ತಿದ್ದಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆಗಳಿಲ್ಲದೆ ಮಕ್ಕಳು ಶಾಲೆಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಅಂತಹ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಶಿಕ್ಷಣ ಇಲಾಖೆ ಬಸ್ ವ್ಯವಸ್ಥೆಯನ್ನು ಕಲ್ಪಿಸಲು ಮುಂದಾಗಿದೆ.
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ ಕಲ್ಪಿಸುವಂತಹ ಯೋಜನೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗೆ ಬರುವ ಮಕ್ಕಳಿಗೆ ಪಿಕ್‌ಅಪ್ ಹಾಗೂ ಡ್ರಾಪ್ ವ್ಯವಸ್ಥೆ ಮಾಡಿಸಲು ಬಸ್‌ಗಳನ್ನು ಬಿಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಸ್ತಾಪಿಸಿದ್ದಾರೆ. ಶಾಲೆಯಿಂದ 4-5 ಕಿ.ಮೀ ವ್ಯಾಪ್ತಿಯೊಳಗೆ ಮಕ್ಕಳನ್ನು ಡ್ರಾಪ್ ಹಾಗೂ ಪಿಕ್‌ಅಪ್ ಮಾಡಲು ಬಸ್ ವ್ಯವಸ್ಥೆ ಮಾಡಲಾಗುತ್ತದೆ ಎನ್ನಲಾಗಿದೆ.
ಮೊದಲ ಹಂತದಲ್ಲಿ ಬೆಂಗಳೂರಿನ ಶಾಲೆಗಳಲ್ಲಿ ಈ ವಿನೂತನ ಪ್ರಯೋಗವನ್ನು ಜಾರಿಗೆ ತಂದು ಬಳಿಕ ಹಂತ ಹಂತವಾಗಿ ರಾಜ್ಯಾದ್ಯಂತ ಬೇರೆ ಬೇರೆ ಜಿಲ್ಲೆಗಳಿಗೂ ಯೋಜನೆಯನ್ನು ವಿಸ್ತರಿಸಲು ಚಿಂತನೆ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ