
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ನೂತನವಾಗಿ ಆರಂಭಗೊಂಡ ಅಶೋಕ ಲೈಲೆಂಡ್ ಷೋರೂಂ ಉದ್ಘಾಟನೆ ಸಮಾರಂಭದಲ್ಲಿ ಯುವ ಕಾಂಗ್ರೆಸ್ ಮುಖಂಡ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ ಶುಭ ಕೋರಿದರು.

ಶೋ ರೂಂ ನಲ್ಲಿ ಬೆಳಗಾವಿ ತಾಲೂಕಿನ ಕೆಲಸಗಾರರನ್ನು ತೆಗೆದುಕೊಳ್ಳಬೇಕು. ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಸ್ಥಳೀಯರಿಗೆ ಅವಕಾಶ ನೀಡುವುದರಿಂದ ಈ ಭಾಗದ ನಿರುದ್ಯೋಗಿಗಳಿಗೆ ಕೆಲಸ ಸಿಗುವುದರೊಂದಿಗೆ ಅವರ ಜೀವನಕ್ಕೆ ದಾರಿಮಾಡಿಕೊಟ್ಟಂತಾಗುತ್ತದೆ ಎಂದು ಅವರು ಹೇಳಿದರು.
ಷೋರೂಂ ಉದ್ಘಾಟನೆಯ ಅಧ್ಯಕ್ಷತೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಅನಿಲ ಬೆನಕೆ, ಷೋರೂಂ ನ ಆಡಳಿತ ವರ್ಗದವರು ಉಪಸ್ಥಿತರಿದ್ದರು.