ಪ್ರಗತಿವಾಹಿನಿ ಸುದ್ದಿ: ಮುಡಾ ಅಕ್ರಮ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು ನೀಡಿದ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.
ರಾಜ್ಯಪಾಲರ ಕಚೇರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಪಾಲರಿಂದ ನೋಟಿಸ್ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಉಪಹಾರ ಕೂಟ ಆಯೋಜಿಸಿ, ಚರ್ಚೆ ನಡೆಸಿದ್ದರು. ಎಲ್ಲಾ ಸಚಿವರು ಕೂಡ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಸಹಮತ ನೀಡಿದ್ದಾರೆ. ಅಲ್ಲದೇ ಇದು ರಾಜಕೀಯ ಪ್ರೇರಿತ ನೋಟಿಸ್ ಆಗಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಸಚಿವರುಗಳು ನೈತಿಕ ಬೆಂಬಲ ನೀಡಿದ್ದಾರೆ.
ಸಿಎಂ ನಿವಾಸದಲ್ಲಿ ಉಪಹಾರ ಕೂಟದ ಬಳಿಕ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಸಿಎಂ ಭಾಗಿಯಾಗಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ