Karnataka NewsPolitics

*ಸಚಿವ ಸಂಪುಟ ಸಭೆಗೆ ಗೈರಾದ ಸಿಎಂ; ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆ

ಪ್ರಗತಿವಾಹಿನಿ ಸುದ್ದಿ: ಮುಡಾ ಅಕ್ರಮ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವ ಇನ್ನೆಲೆಯಲ್ಲಿ, ಕಾನೂನು ಹೋರಾಟಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ.

ತಮ್ಮ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಗೂ ರಾಜ್ಯಪಾಲರಿಂದ ನೋಟಿಸ್ ಜಾರಿಯಾಗಿರುವ ನಿಟ್ಟಿನಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಗೂ ಸಿಎಂ ಅನುಪಸ್ಥಿತರಾಗಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣದ ಬಗ್ಗೆ ನಿರ್ಣಯ ಕೈಗೊಳ್ಳಲಿರುವ ಕಾರಣಕ್ಕೆ, ತನ್ನ ವಿರುದ್ಧ ಕೇಳಿಬಂದಿರುವ ಆರೋಪದ ವಿಚಾರವಾಗಿ ತನ್ನ ನೇತೃತ್ವದಲ್ಲಿ ಸಭೆ ನಡೆಯುವುದು ಸರಿಯಲ್ಲ ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಗೆ ಗೈರಾಗಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ.

ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಉಪಹಾರ ಕೂಟ ಆಯೋಜಿಸಿದ್ದರು. ಈ ವೇಳೆ ಎಲ್ಲಾ ಸಚಿವರು ಕೂಡ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಸಹಮತ ನೀಡಿದ್ದಾರೆ. ಅಲ್ಲದೇ ಇದು ರಾಜಕೀಯ ಪ್ರೇರಿತ ನೋಟಿಸ್ ಆಗಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಸಚಿವರುಗಳು ನೈತಿಕ ಬೆಂಬಲ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button