*ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ರಾಜ್ಯಪಾಲ ಗೆಹ್ಲೋಟ್: ಆರೋಗ್ಯ ವಿಚಾರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ತೀವ್ರ ಅನಾರೋಗ್ಯದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ವೈರಲ್ ಫೀವರ್ ನಿಂದ ಅನಾರೋಗ್ಯಕ್ಕೀಡಾಗಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಎರಡು ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಬಳಿಕ ಗುಣಮುಖರಾಗುತ್ತಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ಆರೋಗ್ಯ ವಿಚಾರಿಸಿದರು. Home add -Advt *ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ*