Kannada NewsLatestNational

ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅನಾರೋಗ್ಯ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ರಾತ್ರಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು.

ಚಿಕಿತ್ಸೆ ನಂತರ ಚೇತರಿಸಿಕೊಂಡ ಅವರನ್ನು ಡಿಸ್ಚಾರ್ಜ್ ಮಾಡಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ರಾತ್ರಿ ಸುಮಾರು 10 ಗಂಟೆಗೆ ಹೃದಯ ಸಂಬಂಧಿ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಎದೆ ನೋವು ಕಾಣಿಸಿಕೊಳ್ಳುತ್ತಲೇ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ಡಿಲಕ್ಸ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಿದ ನಂತರ 1 ಗಂಟೆ ಸುಮಾರಿಗೆ ಡಿಸ್ಚಾರ್ಜ್ ಆಗಿ ರಾಜಭವನಕ್ಕೆ ತೆರಳಿದರು.

Related Articles

Back to top button