
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಿತಿಮೀರುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಪಾಲ ವಾಜುಬಾಯಿ ವಾಲಾ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಲಿದ್ದು, ರಾಜ್ಯಪಾಲರು ಕರೆದಿರುವ ಸಭೆ ಬಗ್ಗೆ ಕಾಂಗ್ರೆಸ್ ಕಿಡಿಕಾರಿದೆ.
ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನನ್ನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೆಂದೇ? ಸರ್ಕಾರದ ಅಸಮರ್ಥ್ಯವೇ ಅಥವಾ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಬಾಗವೇ? ಎಂದು ಪ್ರಶ್ನಿಸಿದೆ.
ಕೊರೊನಾ ನಿಯಂತ್ರಣದಲ್ಲಿ ವಿಫಲವಾಗಿರುವ ಸರ್ಕಾರಕ್ಕೆ ವಿಪಕ್ಷಗಳನ್ನು ಎದುರಿಸುವ ಮುಖವಿಲ್ಲವೇ? ಅಥವಾ ಪರಿಸ್ಥಿತಿ ಎದುರಿಸಲಾಗದೆ ಕೈ ಚೆಲ್ಲಿದೆಯೇ? ಇಂತಹ ಮುಖಹೇಡಿ ಸರ್ಕಾರದಿಂದ ಜನರ ಜೀವ ಉಳಿಸುವುದು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಪರಿಸ್ಥಿತಿ ಕೈಮೀರಿದೆ; ನಾವು ಸಂದಿಗ್ಧಸ್ಥಿಯಲ್ಲಿದ್ದೇವೆ ಎಂದ ಸಚಿವ ಸುಧಾಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ